ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಕೆಆರ್ ಎಸ್ ಪಕ್ಷದ ಸರ್ವ ಸದಸ್ಯರು ಮತ್ತು ಪದಾಧಿಕಾರಿಗಳ ಸಭೆ ನಡೆಸಲಾಯಿತು.
ಸಭೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ರಘು ಜಾಣಗೆರೆ, ರಾಜ್ಯ ಸಂಘಟನಾ ಕಾರ್ಯದರ್ಶಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಕೆ.ಎಸ್.ವೀರಭದ್ರಪ್ಪ, ಬದ್ರಿ, ರಾಜ್ಯ ಕಾರ್ಯನಿರ್ವಾಹಕ ಸಮಿತಿಯ ಸದಸ್ಯ ಮಹೇಶ್ ನಗರಂಗೆರೆ, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಎಲ್.ಟಿ ನಾಗರೆಡ್ಡಿ ರವರು ಉಪಸ್ಥಿತಿಯಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಪಕ್ಷದ ಬಲವರ್ಧನೆ, ಪಕ್ಷ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿಯಾನ, ಸದಸ್ಯತ್ವ ನೋಂದಣಿ ಮತ್ತಿತರ ಮುಖ್ಯ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮುಂದಿನ ತಿಂಗಳು 10ರಂದು ನಡೆಯುವ ಪಕ್ಷದ ವಾರ್ಷಿಕೋತ್ಸವ ಕುರಿತು ಪದಾಧಿಕಾರಿಗಳು ಚರ್ಚಿಸಿದರು ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣ ವಿಬಿ ತಿಳಿಸಿದರು.