ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಇಬ್ಬರು ಸಾವು, 12 ಮಂದಿಗೆ ಗಾಯ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿ
, 12 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಚೌಡಸಂದ್ರ ಗ್ರಾಮದ ನಿವಾಸಿ ಬಾಲಾನಾಯಕ್(46) ಮತ್ತು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶ್ವೇತಾ(42) ಎಂದು ಗುರುತಿಸಲಾಗಿದೆ. 

- Advertisement - 

ಮಸ್ಕಿಯಿಂದ ಬೆಂಗಳೂರಿಗೆ ಶನಿವಾರ ರಾತ್ರಿ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

- Advertisement - 

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Share This Article
error: Content is protected !!
";