ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸಂಸದ ಮಿತ್ರರಾದ ಬ್ರಿಜೇಶ್ ಚೌಟ ಅವರ ನೇತೃತ್ವದ ಕುದುರೆಮುಖ ಮಜ್ದೂರ್ ಸಂಘದ ನಿಯೋಗವು ನವದೆಹಲಿಯ
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಚರ್ಚಿಸಿದರು.
ಸಂಸ್ಥೆಯನ್ನು ಉಳಿಸಿ ಕಾರ್ಮಿಕರ ಹಿತ ರಕ್ಷಿಸುವ ನಿಟ್ಟಿನಲ್ಲಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಾಯಿತು. ಸಂಸದರಾದ ಶ್ರೀನಿವಾಸ ಪೂಜಾರಿ ಅವರು ಈ ಸಂದರ್ಭದಲ್ಲಿ ಇದ್ದರು.

