ಸುರಂಗ ಮಾರ್ಗ, ಫೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಗಳ ತುರ್ತು ಅನುಷ್ಠಾನಕ್ಕೆ ಮನವಿ ಮಾಡಿದ ಕುಮಾರಸ್ವಾಮಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುರಂಗ ಮಾರ್ಗ, ಫೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಗಳ ತುರ್ತು ಅನುಷ್ಠಾನಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅತ್ಯಾಧುನಿಕ ಸುರಂಗ ಮಾರ್ಗ ನಿರ್ಮಾಣ, ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿ ಹಾಗೂ ರಾಜ್ಯದ ಪ್ರಮುಖ ಸಾರಿಗೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

- Advertisement - 

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಿಸುವ ಸಲುವಾಗಿ ಅತ್ಯಗತ್ಯವಾಗಿರುವ ಇವೆರಡೂ ಯೋಜನೆಗಳ ಕಾಮಗಾರಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಹೆದ್ದಾರಿ ಸಚಿವರಿಗೆ ಮನವಿ ಮಾಡಿದರು.

 

- Advertisement - 

 

Share This Article
error: Content is protected !!
";