ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುರಂಗ ಮಾರ್ಗ, ಫೆರಿಫೆರಲ್ ರಿಂಗ್ ರಸ್ತೆ ಯೋಜನೆಗಳ ತುರ್ತು ಅನುಷ್ಠಾನಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೇಂದ್ರ ಭೂ ಸಾರಿಗೆ ಸಚಿವರಲ್ಲಿ ಮನವಿ ಮಾಡಿದ್ದಾರೆಂದು ಜೆಡಿಎಸ್ ತಿಳಿಸಿದೆ.
ಬೆಂಗಳೂರಿನಲ್ಲಿ ಅತ್ಯಾಧುನಿಕ ಸುರಂಗ ಮಾರ್ಗ ನಿರ್ಮಾಣ, ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿ ಹಾಗೂ ರಾಜ್ಯದ ಪ್ರಮುಖ ಸಾರಿಗೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.
ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಿಸುವ ಸಲುವಾಗಿ ಅತ್ಯಗತ್ಯವಾಗಿರುವ ಇವೆರಡೂ ಯೋಜನೆಗಳ ಕಾಮಗಾರಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಹೆದ್ದಾರಿ ಸಚಿವರಲ್ಲಿ ಕುಮಾರಸ್ವಾಮಿ ಮನವಿ ಮಾಡಿದರು.