ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದರು ಎಂಬ ವಾರ್ತೆ ತಿಳಿದು ತೀವ್ರ ಆಘಾತ ಉಂಟಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಂಬನಿ ಮಿಡಿದ್ದಾರೆ.
ಮಹಾರಾಷ್ಟ್ರದ ಪ್ರಭಾವೀ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.
ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಸುನೇತ್ರಾ ಪವಾರ್, ಸುಪುತ್ರ ಪಾರ್ಥ್ ಪವಾರ್ ಮತ್ತು ಇಡೀ ಕುಟುಂಬಕ್ಕೆ ಪವಾರ್ ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರೆಲ್ಲರಿಗೂ ನೀಡಲಿ ಎಂದು ಅವರು ಆಶಿಸಿದ್ದಾರೆ.

