ಮಳೆ ಅನಾಹುತದ ಕಡೆ ಗಮನ ಹರಿಸಲು ಆಗ್ರಹ ಮಾಡಿದ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  
ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.

- Advertisement - 

ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪಡಿಸಿ. ಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವಂತೆ ಅವರು ಆಗ್ರಹ ಮಾಡಿದ್ದಾರೆ.

- Advertisement - 

 ರಾಜ್ಯಾದ್ಯಂತ ಮಳೆಹಾನಿ ಪ್ರದೇಶಗಳಿಗೆ ಸಚಿವರನ್ನು ನಿಯೋಜನೆ ಮಾಡಿ ತಕ್ಷಣವೇ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಲು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

 

- Advertisement - 

 

Share This Article
error: Content is protected !!
";