ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭೇಟಿಯಾಗಿದ್ದರು.
ಭೇಟಿ ಸಂದರ್ಭದಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಮಾನಯಾನ ವಿಷಯಗಳ ಕುರಿತು ಆಳವಾದ ಚರ್ಚೆ ನಡೆಸಿದ ಹೆಚ್ ಡಿ ಕುಮಾರಸ್ವಾಮಿರವರು ದಸರಾ ಸಮಯದಲ್ಲಿ ಪ್ರವಾಸಿಗರಿಗೆ ವಿಶಿಷ್ಟ ಆಕರ್ಷಣೆಯಾಗುವಂತೆ, ಕೆಆರ್‌ಎಸ್ ಹಿನ್ನೀರಿನಲ್ಲಿ ಸಮುದ್ರವಿಮಾನ ಸೇವೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಮನವಿಪತ್ರವನ್ನು ಸಲ್ಲಿಸಿ ಒತ್ತಾಯಿಸಿದರು.
ಹಾಗೆಯೇ, ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲು ಹಾಸನ ವಿಮಾನ ನಿಲ್ದಾಣದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗೊಳಿಸುವ ಅಗತ್ಯವನ್ನು ಚರ್ಚಿಸಿದರು.

ಜೊತೆಗೆ, ರಾಜ್ಯದ ಭವಿಷ್ಯದ ವಿಮಾನಯಾನ ಅಗತ್ಯಗಳನ್ನು ಪೂರೈಸಲು ಅತ್ಯಂತ ಮುಖ್ಯವಾಗಿರುವ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದರು.

