ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜಗಾರ್ ಮೇಳ)ದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಆಯ್ಕೆಯಾಗಿರುವ 51,000 ಅಭ್ಯರ್ಥಿಗಳಿಗೆ ನೇರ ನೇಮಕ ಪತ್ರ ವಿತರಿಸುವ ಆನ್ಲೈನ್ ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರೊಂದಿಗೆ ಪಾಲ್ಗೊಳ್ಳಲಾಯಿತು. 

ಪ್ರಧಾನಿಗಳ ಸಾರಥ್ಯದಲ್ಲಿ ದೇಶಾದ್ಯಂತ 40 ಕಡೆ ನಡೆದ ಕಾರ್ಯಕ್ರಮಗಳ ಪೈಕಿ ನಾನು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು, ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕ ಪತ್ರವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಿತರಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಹಾಗೂ ಅಂಚೆ ಇಲಾಖೆಯ ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಅವರು ಜತೆಯಲ್ಲಿ ಉಪಸ್ಥಿತರಿದ್ದರು.

- Advertisement -  - Advertisement - 
Share This Article
error: Content is protected !!
";