ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಮೇಕೆದಾಟು ಅಣೆಕಟ್ಟು ನಾವು ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಈಗ ಮತ್ತೆ ಹೇಳುತ್ತಿದ್ದಾರೆ.
ಇದೇ ಮಾತನ್ನು ಮಂಡ್ಯದಲ್ಲಿ ಲೋಕಸಭಾ ಚುನಾವಣೆಯ ವೇಳೆ ಹೇಳುತ್ತಿದ್ದರು. ಈಗ ಯಾಕೆ ಈ ರೀತಿ ಹೇಳುತ್ತಿದ್ದಾರೆ? ಕರ್ನಾಟಕದಲ್ಲಿ ಅವರು ಅಧಿಕಾರಕ್ಕೆ ಬರುವುದಿಲ್ಲ. ಹಾಗೆಂದು ಮೇಕೆದಾಟು ಅಣೆಕಟ್ಟು ರಾಜ್ಯಕ್ಕೆ ಬೇಡವೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದರು.
ನಾನು ಜನತಾದಳದ (ಎಸ್) ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ 2004ರಲ್ಲಿ ಅತಿ ಹೆಚ್ಚು ಅಂದರೆ 59 ಸ್ಥಾನಗಳನ್ನು ಪಡೆದಿದ್ದೆವು. ಅವರ ಶಕ್ತಿ ಚುನಾವಣೆಯಿಂದ ಚುನಾವಣೆಗೆ ಕುಂಠಿತವಾಗಿದೆಯೇ ಹೊರೆತು ಹೆಚ್ಚಾಗಿಲ್ಲ. ಈಗ ಎಷ್ಟು ಸ್ಥಾನಗಳಿವೆ? ಅವರದ್ದು ಹಗಲು ಗನಸು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.