ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಉತ್ತೇಜನ -ಕುಮಾರಸ್ವಾಮಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿ ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಮಹಾಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕೈಗಾರಿಕೋದ್ಯಮಿಗಳ ಜತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು.
ಇವಿ ಕ್ಷೇತ್ರದ ಉದ್ಯಮದ ಪ್ರಮುಖರು ಅನೇಕ ಅಮೂಲ್ಯ ವಿಚಾರಗಳನ್ನು ನನ್ನೊಂದಿಗೆ ಹಂಚಿಕೊಂಡರು.

ಸಾರಿಗೆ ವಲಯದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಿ ಪರಿಸರ ಪೂರಕ ಸಾರಿಗೆ ವ್ಯವಸ್ಥೆ ರೂಪಿಸುವ ದೃಢ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿದ್ದು, ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ನಾವು ಅವಿರತವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

- Advertisement - 

ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ವಿಸ್ತರಣೆಗೆ ಇರುವ ವಿಪುಲ ಅವಕಾಶಗಳ ಬಗ್ಗೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸುದೀರ್ಘ ಚರ್ಚೆ ನಡೆಸಿದರು.

- Advertisement - 

ಸಂಶೋಧನೆ, ಉತ್ಪಾದನೆ, ಉದ್ಯೋಗ ಸೃಷ್ಟಿಗೆ ಒತ್ತು:
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಸಂಶೋಧನೆ
, ಉತ್ಪಾದನೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದರು.

ಎಆರ್ ಎಐ ಪರೀಕ್ಷಾ ಕೇಂದ್ರ ಸ್ಥಾಪನೆ: ಮಂಡ್ಯ ಜಿಲ್ಲೆಯಲ್ಲಿ 500 ಕೋಟಿ ವೆಚ್ಚದಲ್ಲಿ ಜಾಗತಿಕ ಮಟ್ಟದ ಎಆರ್ ಐಎ ಪರೀಕ್ಷಾ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.

ಮೇಕ್ ಇನ್ ಇಂಡಿಯಾ, ಉದ್ಯೋಗ ಸೃಷ್ಟಿ: ಈ ಯೋಜನೆಯಿಂದ ಸಾವಿರಾರು ಸಂಖ್ಯೆಯಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಪ್ರಧಾನಿಗಳ ದೂರದೃಷ್ಟಿಯಂತೆ ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ಬೃಹತ್ ಪ್ರಮಾಣದಲ್ಲಿ ಉತ್ತೇಜನ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದರು.

Share This Article
error: Content is protected !!
";