ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು ತಮ್ಮ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ ಜನಸ್ಪಂದನ ಕಾರ್ಯಕ್ರಮದ 100ನೇ ವಾರದ ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಂಡಿದ್ದರು.
ಶ್ರೀ ಶ್ರೀ ಶಂಭುನಾಥ ಸ್ವಾಮೀಜಿ ಅವರು, ಶ್ರೀ ಶ್ರೀ ಡಾ. ಬಸವ ರಮಾನಂದ ಸ್ವಾಮೀಜಿ ಅವರು, ಶ್ರೀ ಶ್ರೀ ಸತ್ಕೀರ್ತಿನಾಥ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿದ್ದ
ಈ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ, ಜಲಶಕ್ತಿ ಖಾತೆ ಸಚಿವ ವಿ. ಸೋಮಣ್ಣ, ಶಾಸಕರಾದ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಸೇರಿದಂತೆ ಮಾಜಿ ಶಾಸಕರು, ಅನೇಕ ಗಣ್ಯರು, ಕ್ಷೇತ್ರದ ಜನರು ದೊಡ್ಡ ಪ್ರಮಾಣದಲ್ಲಿ ಭಾಗಿಯಾಗಿದ್ದರು.

