ವಿಕಸಿತ ಭಾರತ 2047ಕ್ಕೆ ಸಾಕಾರ-ಕುಮಾರಸ್ವಾಮಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026-2027
ನೇ ಸಾಲಿನ ಕೇಂದ್ರದ ಆಯವ್ಯಯದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದರು.

2047ಕ್ಕೆ ವಿಕಸಿತ ಭಾರತ ಸಾಕಾರ ಮಾಡಲೇಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪಕ್ಕೆ ಬುನಾದಿಯಾಗಿ ಈ ಬಜೆಟ್ ರೂಪುಗೊಂಡಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

- Advertisement - 

ದೂರದೃಷ್ಟಿ, ಕ್ಷಮತೆ, ದಕ್ಷತೆ ಹಾಗೂ ಅಭಿವೃದ್ಧಿಯ ಅಂಶಗಳನ್ನು ಮುಂಗಡಪತ್ರ ಒಳಗೊಂಡಿದೆ. ಕರ್ನಾಟಕಕ್ಕೆ ಅನೇಕ ರೀತಿಯಲ್ಲಿ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಿದೆ. ಈ ಬಗ್ಗೆ ಮಾಧ್ಯಮ ಮಿತ್ರರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಅವರು ತಿಳಿಸಿದರು.

ಮಾಜಿ ಮಂತ್ರಿ ಸಾ.ರಾ. ಮಹೇಶ್‌, ಮೈಸೂರು- ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯಧುವೀರ್ ಒಡೆಯರ್, ಶಾಸಕ ಜಿ.ಡಿ. ಹರೀಶ್‌ಗೌಡ, ಶ್ರೀವತ್ಸ, ಮಾಜಿ ಶಾಸಕ ಅಶ್ವಿನ್‌ಕುಮಾರ್‌, ಮಾಜಿ ಮೇಯರ್ ರವಿಕುಮಾರ್ ಸೇರಿದಂತೆ ಮೈತ್ರಿಪಕ್ಷಗಳ ಅನೇಕ ಮುಖಂಡರು ಹಾಜರಿದ್ದರು.

- Advertisement - 

 

Share This Article
error: Content is protected !!
";