ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಬೃಹತ್‌ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾನುವಾರ ಬೆಂಗಳೂರಿನ ನಿವಾಸದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.
ರಾಜ್ಯದ ಮೂಲೆ ಮೂಲೆಗಳಿಂದ ಹಲವು ಸಮಸ್ಯೆಗಳನ್ನು ಹೊತ್ತು ತಂದಿದ್ದ ಸಾರ್ವಜನಿಕರ ಅಹವಾಲುಗಳನ್ನು ಕೇಂದ್ರ ಸಚಿವರು ಸಮಾಧಾನದಿಂದ ಆಲಿಸಿ ಪರಿಹಾರ ಸೂಚಿಸುವ ಕಾರ್ಯ ಮಾಡಿದರು.

