ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಬಹಳ ಸಂತೋಷದಿಂದ ಪಾಲ್ಗೊಳ್ಳಲಾಯಿತು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಅನೇಕ ರೈತರು, ಕೃಷಿ ವಿಜ್ಞಾನಿಗಳು, ಕೃಷಿ ತಂತ್ರಜ್ಞರು ಭಾಗಿಯಾಗಿದ್ದ ಮೇಳವು ಯಶಸ್ವಿಯಾಗಿ ಜಿಲ್ಲೆಯ ಜನರ ಮನೆಮನಗಳನ್ನು ಮುಟ್ಟಿದೆ.
ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು ಕೃಷಿ ವಲಯಕ್ಕೆ 1.32 ಲಕ್ಷದ ಕೋಟಿ ಅನುದಾನ ಹಂಚಿಕೆ ಮಾಡಿದೆ. ಅನ್ನದಾತನ ಆರ್ಥಿಕ ಶಕ್ತಿ ವೃದ್ಧಿಸಲು ಮಾನ್ಯ ಮೋದಿ ಅವರು ಪರಿವರ್ತನಾತ್ಮಕ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

