ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ನನ್ನ ಹೃದಯಪೂರ್ವಕ ಸ್ವಾಗತವಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವನು ನಾನು. ನನ್ನನ್ನು ಸಂಸದನನ್ನಾಗಿ ಆಯ್ಕೆ ಮಾಡಿರುವ ಮಂಡ್ಯ ಜನತೆಗೆ ನಾನೆಂದಿಗೂ ಆಭಾರಿ. ಅದಕ್ಕೆ ತಕ್ಕಂತೆ ಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಬೇಕಿರುವ ಕಾರ್ಯಕ್ರಮ, ಯೋಜನೆಗಳ ಬಗ್ಗೆ ಅವಿರತವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಕೇಂದ್ರ ಸಚಿವನಾಗಿ ಇಡೀ ರಾಜ್ಯದ ಮತ್ತು ಸಂಸದನಾಗಿ ಮಂಡ್ಯದ ಆಶೋತ್ತರಗಳ ಈಡೇರಿಕೆಗೆ ನಾನು ಬದ್ಧ, ಅದರಲ್ಲಿ ರಾಜಿ ಪ್ರಶ್ನೆ ಇಲ್ಲ. ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ತಿಳಿಗೇಡಿಗಳು, ಅದಕ್ಕೆ ತುಪ್ಪ ಸುರಿಯುವ ಸೋಗಲಾಡಿಗಳು ಸತ್ಯ ಅರಿತುಕೊಳ್ಳಲಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ಕೈಗಾರಿಕೆ ಸಚಿವ ಕುಮಾರಸ್ವಾಮಿ ಆಶಿಸಿದ್ದಾರೆ.