ಉಕ್ಕಿನಕಂತೆ ಮಠದ ಆರಾಧನೆ ಮತ್ತು ಕಟ್ಟಡ ಉದ್ಘಾಟನೆಯಲ್ಲಿ ಭಾಗಿಯಾದ ಕುಮಾರಸ್ವಾಮಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಾದಹಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ನಡೆದ ಶ್ರೀ ಗುರು ಬೂದಿಸ್ವಾಮಿಗಳ 397ನೇ ಆರಾಧನೆ ಹಾಗೂ 63 ಪ್ರಮಥರ ಪೂಜೆ, ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಕ್ತಿಪೂರ್ವಕವಾಗಿ ಪಾಲ್ಗೊಂಡಿದ್ದರು.

ಶ್ರೀ ಸುತ್ತೂರು ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀಶ್ರೀಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಸಿದ್ದಗಂಗಾ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀಶ್ರೀಶ್ರೀ ಡಾ. ಸಿದ್ದಲಿಂಗ ಮಹಾಸ್ವಾಮೀಜಿ, ಉಕ್ಕಿನಕಂತೆ ಮಠದ ಪರಮಪೂಜ್ಯ ಶ್ರೀಶ್ರೀಶ್ರೀ ಸಾಂಬಸದಾಶಿವ ಸ್ವಾಮೀಜಿ ಅವರು ಸೇರಿದಂತೆ ಅನೇಕ ಪರಮಪೂಜ್ಯರು ದಿವ್ಯಸಾನ್ನಿಧ್ಯ ವಹಿಸಿದ್ದರು.

- Advertisement - 

ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಮಂತ್ರಿ ಸಾ.ರಾ. ಮಹೇಶ್, ಶಾಸಕ ಜಿ.ಡಿ. ಹರೀಶ್ ಗೌಡ, ಮಾಜಿ ಶಾಸಕರು ಹಾಗೂ ಮೈಸೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಗೂಳಿಗೌಡ ಅವರು ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

- Advertisement - 
Share This Article
error: Content is protected !!
";