ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಣರಾಜ್ಯೋತ್ಸವದ ಪ್ರಯುಕ್ತ ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ತೋಟಗಾರಿಕೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನ ಯಶಸ್ವಿಯಾಗಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಶುಭ ಹಾರೈಸಿದರು.
ತೋಟಗಾರಿಕೆ ಇಲಾಖೆ ಆವರಣದಲ್ಲಿ ಇದೇ ಜನವರಿ 23ರಿಂದ 27ರವರೆಗೆ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ನಮ್ಮ ಕೃಷಿ ಪರಂಪರೆ, ಮಂಡ್ಯ ಸೊಗಡಿನ ಸೊಬಗು ಅನಾವರಣಗೊಂಡಿರುವುದು ಅತ್ಯಂತ ಸಂತೋಷದ ಸಂಗತಿ.
ರೈತರು, ಸ್ವಸಹಾಯ ಗುಂಪುಗಳ ಸಹೋದರಿಯರು, ವಿದ್ಯಾರ್ಥಿಗಳು ಸೇರಿದಂತೆ ಇಡೀ ಮಂಡ್ಯ ಜಿಲ್ಲೆಯ ಜನತೆ ಈ ಪ್ರದರ್ಶನದಲ್ಲಿ ಭಾಗಿಯಾಗಿರುವುದು ಸ್ವಾಗತಾರ್ಹ. ಪ್ರದರ್ಶನವೂ ಎಲ್ಲರಿಗೂ ಉಪಯೋಗವಾಗಿ ದೊಡ್ಡ ಪ್ರಮಾಣದಲ್ಲಿ ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತಾ, ಎಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಕುಮಾರಸ್ವಾಮಿ ಅವರು ಕೋರಿದರು.

