ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯ ನಗರದ ಸ್ವರ್ಣಸಂದ್ರದಲ್ಲಿ ಶ್ರೀ ಕಾಳಮ್ಮ ಹಾಗೂ ಶ್ರೀ ಮಾರಮ್ಮ ದೇವಿಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಕಳಸ ಪ್ರತಿಷ್ಠಾಪನಾ ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು.
ಇದೇ ಸಂದರ್ಭದಲ್ಲಿ ಶ್ರೀ ಪುರುಷೋತ್ತಮನಂದನಾಥ ಸ್ವಾಮೀಜಿ, ಮಾಜಿ ಸಚಿವ ಅತ್ಮಾನಂದ, ಮನ್ ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರ, ಜಿಲ್ಲಾಧ್ಯಕ್ಷ ಡಿ.ರಮೇಶ್, ನಗರಸಭೆ ಅಧ್ಯಕ್ಷ ನಾಗೇಶ್, ರವಿ, ಜವರಪ್ಪ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

