ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಪ್ರತಿಭಾ ಪುರಸ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕುಂಚಿಗ ವೀರಶೈವ ಲಿಂಗಾಯಿತ ಸಮಾಜ ಹಾಗೂ ಉತ್ಥಾನ ಟ್ರಸ್ಟ್ ವತಿಯಿಂದ ಆ.೨೩ ರಂದು ಬೆಳಿಗ್ಗೆ ೧೦-೪೦ ಕ್ಕೆ ನೀಲಕಂಠೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಗೌರವಾಧ್ಯಕ್ಷರು ಹಾಗೂ ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪರಮೇಶ್ವರಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ. ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ಎಂ.ಬಿ.ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸುವರು.

- Advertisement - 

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರುಗಳಾದ ಪಿ.ರಮೇಶ್, ಟಿ.ಹೆಚ್.ಬಸವರಾಜಪ್ಪ, ನಿವೃತ್ತ ಪ್ರಾಚಾರ್ಯರಾದ ಬಿ.ಸಿ.ಕಾಂತರಾಜ್ ಇವರುಗಳು ಆಗಮಿಸಲಿದ್ದಾರೆ.

ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಕಾರ್ಯದರ್ಶಿ ಹೆಚ್.ಕುಬೇರಪ್ಪ ದಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡುವರು.

- Advertisement - 

ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕುಂಚಿಗ ವೀರಶೈವ ಲಿಂಗಾಯಿತ ಸಮಾಜ ಪ್ರಕಟಣೆಯಲ್ಲಿ ಕೋರಿದೆ.

Share This Article
error: Content is protected !!
";