ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಕುವೆಂಪು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೈಗಾರಿಕಾ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಹೆಚ್.ಎಸ್.ಬೋಜ್ಯಾನಾಯಕ್ ಇವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸಿ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಇವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇವರು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಸುಮಾರು 25 ವರ್ಷಗಳ ಕಾಲ ಬೋಧನೆಯಲ್ಲಿ ತೊಡಗಿಸಿಕೊಂಡಿದ್ದರು. ಜೊತೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ ಹಾಗೂ ಪರೀಕ್ಷಾಂಗದ ಕುಲಸಚಿವರಾಗಿ ಸೇವೆ ಸಲ್ಲಿಸಿ ಅಪಾರವಾದ ಆಡಳಿತ ಅನುಭವ ಹೊಂದಿದ್ದಾರೆ. ವಿಶ್ವವಿದ್ಯಾನಿಲಯದ ವಿವಿಧ ಪ್ರಾದಿಕಾರಗಳಲ್ಲಿಯೂ ಸೇವೆ ಸಲ್ಲಿಸಿದ ಅನುಭವ ಇವರಿಗಿದೆ. ಇವರ ಕೆಪಿಎಸ್ಸಿ ಸದಸ್ಯತ್ವದ ಅವಧಿ 6 ವರ್ಷಗಳಾಗಿರುತ್ತಧೆ.