ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟಕ್ಕೆ ಸುಧೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತರು ಮತ್ತು ಕ್ರಿಯಾಶೀಲ ಸಂಘಟಕರಾಗಿದ್ದ ಕೆ.ವಿಕ್ರಮರಾವ್ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಲಾಗಿದೆ.
ದಿನಾಂಕ 14-05-2025 ರಂದು ಬೆಳಿಗ್ಗೆ 11-30 ಕ್ಕೆ ಕೆಜಿ ರಸ್ತೆ ಕಂದಾಯ ಭವನದ 3ನೇಮಹಡಿ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.