ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಠಿಣ ಷರತ್ತು ಸಡಿಲಿಸಲು ಕೆಯುಡಬ್ಲೂಜೆ ಆಗ್ರಹ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರಾಮೀಣ ಪತ್ರಕರ್ತರ ಬಸ್‌ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿರುವ ಕಠಿಣ ಷರತ್ತುಗಳನ್ನು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯಡಬ್ಲೂೃಜೆ) ಒತ್ತಾಯಿಸಿದೆ.

ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಮೊದಲ ಹಂತದಲ್ಲಿ 5,500 ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ನೀಡಬೇಕಾಗಿತ್ತು. ಆದರೆ ಈ ತನಕ ಕನಿಷ್ಠ 200 ಜನ ಪತ್ರಕರ್ತರಿಗೂ ಬಸ್‌ಪಾಸ್ ನೀಡದೆ ಇರುವುದು ಅತ್ಯಂತ ವಿಷಾದದ ಸಂಗತಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

- Advertisement - 

ಬಸ್‌ಪಾಸ್‌ಗೆ ವಿಧಿಸಿರುವ ಕೆಲ ಕಠಿಣ ಷರತ್ತುಗಳನ್ನು ಸಡಿಲಿಸಬೇಕೆಂದು ಕೆಯುಡಬ್ಲ್ಯು ಜೆ ಈ ಹಿಂದೆಯೇ ಹಲವು ಬಾರಿ ಪತ್ರ ಬರೆದು ವಿನಂತಿಸಿತ್ತು. ಆದರೂ ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ ಎಂದು ಹೇಳಿದ್ದಾರೆ.

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಪಡೆಯಲು ಜಿಲ್ಲಾ ಮತ್ತು ತಾಲ್ಲೂಕು .ಹಾಗೂ ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅರ್ಹರಾಗಿರುತ್ತಾರೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಪೂರ್ಣಾವಧಿ ನೇಮಕಾತಿ ಇರುವುದಿಲ್ಲ. ಆದುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪತ್ರಿಕಾ ಸಂಸ್ಥೆಗಳು/ಸಂಪಾದಕರು ನೀಡುವ ದೃಢೀಕರಣ ಆಧರಿಸಿ ಬಸ್‌ಪಾಸ್ ನೀಡಬೇಕೆಂದು ಅವರು ಕೋರಿದ್ದಾರೆ.

- Advertisement - 

ಮಾನ್ಯತೆ ಪಡೆದ ಜಿಲ್ಲಾ ಮಟ್ಟದ ಪತ್ರಿಕೆಗಳಿಗೆ ತಾಲ್ಲೂಕು ಮಟ್ಟದಿಂದ ವರದಿಗಾರರಾಗಿರುವ ಎಲ್ಲ ಪತ್ರಕರ್ತರಿಗೆ ಬಸ್‌ಪಾಸ್ ನೀಡಬೇಕು. ಹೋಬಳಿ ಹಂತದಲ್ಲಿಯೂ ಹಲವು ಪತ್ರಿಕೆಗಳಿಗೆ ವರದಿಗಾರರು ಇರುವುದರಿಂದ ಅವರಿಗೂ ಬಸ್‌ಪಾಸ್ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಸಂಘವು ಒತ್ತಾಯಿಸಿದೆ.

 

 

 

Share This Article
error: Content is protected !!
";