ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಇಲ್ಲ ಎಂದು ಮಾಧ್ಯಮಗಳ ಮುಂದೆ ತಿಪ್ಪೇಸಾರುತ್ತಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರೇ , ರಾಜ್ಯಾದ್ಯಂತ ಯೂರಿಯಾ ಗೊಬ್ಬರಕ್ಕಾಗಿ ಅನ್ನದಾತರು ಪಡುತ್ತಿರುವ ಸಂಕಷ್ಟ ನಿಮಗೆ ಕಾಣಿಸುತ್ತಿಲ್ಲವೇ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
ಕೇವಲ ಒಂದು ಚೀಲ ಯೂರಿಯಾ ಖರೀದಿಸಲು ಬೆಳಗ್ಗೆ 4 ಗಂಟೆಯಿಂದ ರೈತರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದರೂ ಗೊಬ್ಬರ ಸಿಗುತ್ತಿಲ್ಲ.
ಯೂರಿಯಾ ಗೊಬ್ಬರದ ದಾಸ್ತಾನು ಇದ್ದರೆ, ರೈತರಿಗೆ ಕೊಡಲು ಯಾಕಿಷ್ಟು ವಿಳಂಬ ಮಾಡುತ್ತಿದ್ದೀರಿ ? ಕೃತಕ ಅಭಾವ ಸೃಷ್ಟಿಸಿ ದುಪ್ಪಟ್ಟು ಹಣಕ್ಕೆ ಮಾರುವ ಹುನ್ನಾರವೇ ?
ಎಲ್ಲೆಡೆ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಅನ್ನದಾತರಿಗೆ ಯೂರಿಯಾ ಗೊಬ್ಬರ ವಿತರಿಸದ ರೈತ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

