ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ನಂದಿಪುರ, ಸೊಂಡೆಕೊಳ ಗ್ರಾಮದ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.
ನಂದಿಪುರ, ಸೊಂಡೆಕೊಳ ಗ್ರಾಮದ ಕೆರೆ ಅಂಗಳವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತಾಲ್ಲೂಕು ಸರ್ವೆಯರ್ ಅವರು ಒತ್ತುವರಿ ಗುರುತಿಸಿ, ನಕ್ಷೆಯನ್ನು ತಯಾರಿಸಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಕಚೇರಿಗೆ ಸಲ್ಲಿಸಿರುತ್ತಾರೆ.
ಸರ್ವೋಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮ-2014 ರನ್ವಯ ಕೆರೆ ಒತ್ತುವರಿ ತೆರವುಗೊಳಿಸಬೇಕಾಗಿದೆ.
ಅದರಂತೆ ಸಂಬಂಧಿತ ಎಲ್ಲ ರೈತರಿಗೆ ನೋಟೀಸ್‍ಗಳನ್ನು ನೀಡಲಾಗಿದ್ದು, ಕೆರೆ ಅಂಗಳ ಒತ್ತುವರಿಯನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

