ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಕಮಿಷನ್‌ಕಾಂಗ್ರೆಸ್” ಸರ್ಕಾರದ ಲಂಚಾವತಾರವನ್ನು ಸ್ವತಃ ಕರ್ನಾಟಕ ಕಾಂಗ್ರೆಸ್ ಶಾಸಕ ಕೆ.ಎಸ್. ಬಸವಂತಪ್ಪ ಬಹಿರಂಗಪಡಿಸಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಲು ಲಕ್ಷ ಲಕ್ಷ ಲೆಕ್ಕದಲ್ಲಿ ಲಂಚ ಪಡೆಯುತ್ತಿರುವುದನ್ನು ಮಾಯಕೊಂಡ ಶಾಸಕರು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ.
ಕಾಂಗ್ರೆಸ್‌ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್1 ಆಗಿದೆ ಎನ್ನುವ ಬಸವರಾಜ ರಾಯರೆಡ್ಡಿ ಅವರ ಮಾತು ಅಕ್ಷರಶಃ ಸತ್ಯ.
ಭ್ರಷ್ಟಾಚಾರದ ಪಿತಾಮಹ ಸಿದ್ದರಾಮಯ್ಯ ಅವರೇ ನಿಮ್ಮ ಸರ್ಕಾರದ ಲಂಚದಾಹ ಸಾಗರದಷ್ಟು ಅಳ-ಅಗಲ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.