ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಡಿಸೆಂಬರ್ ೧ರಂದು ಸಂಜೆ ೫.೩೦ ಗಂಟೆಗೆ ೩೯ನೇ ವರ್ಷದ ಲಕ್ಷದೀಪೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದೆ.
ಈ ಸಮಾರಂಭಕ್ಕೆ ಸ್ವಾಮೀಜಿಗಳು, ಗಣ್ಯ ವ್ಯಕ್ತಿಗಳು ಆಗಮಿಸಲಿದ್ದು, ಲಕ್ಷದೀಪೋತ್ಸವ ವಿಶೇಷ ಸೇವೆಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕೆಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಮಹೇಶ್ ತಿಳಿಸಿದ್ದಾರೆ.