ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಮುರುಳಿ ಮೋಹನ್ ರವರ ತಾಯಿ ಲಕ್ಷ್ಮಮ್ಮ 80 ಸೋಮವಾರ ನಿಧನರಾಗಿದ್ದಾರೆ.
ಮೃತರು ಮುರುಳಿ ಮೋಹನ ಸೇರಿದಂತೆ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ನೇತ್ರಗಳನ್ನು ಅಭಿಷೇಕ್ ನೇತ್ರಾಲಯಕ್ಕೆ ದಾನ ಮಾಡಲಾಗಿದ್ದು ಮಂಗಳವಾರ ಬೆಳಿಗ್ಯೆ 10ಗಂಟೆಗೆ ಮುಕ್ತಿ ದಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಹಲವಾರು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

