ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಇಳಕಲ್ ಮತ್ತು ಹುನಗುಂದ ಎರಡೂ ತಾಲ್ಲೂಕುಗಳಲ್ಲಿ 100 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು
, ನಿವೇಶನ ಮತ್ತು ಅನುದಾನದ ಲಭ್ಯತೆಯನುಸಾರ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳಕರ್ ತಿಳಿಸಿದರು.

ವಿಧಾನಸಭೆಯ  ಅಧಿವೇಶನದಲ್ಲಿ ಹುನುಗುಂದ ಶಾಸಕರಾದ ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ ಇವರು ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳಲ್ಲಿ 358 ಅಂಗನವಾಡಿಗಳ ಪೈಕಿ 217 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿದ್ದು, 41 ಅಂಗನವಾಡಿ ಕೇಂದ್ರಗಳು ಸರ್ಕಾರಿ ಕಟ್ಟಡ/ಪರ್ಯಾಯ ವ್ಯವಸ್ಥೆಯಾಗಿ ಇತರೆ ಕಟ್ಟಡದಲ್ಲಿ ನಡೆಯುತ್ತಿವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ 100 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಿಕೊಡಬೇಕೆಂದು ಕೇಳಿದ  ಪ್ರಶ್ನೆಗೆ  ಒಟ್ಟಾರೆ  3500 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.

- Advertisement - 

ಈಗಾಗಲೇ ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮ ವಹಿಸಲಾಗಿದ್ದು, ಸ್ವಂತ ಕಟ್ಟಡ ನಿರ್ಮಿಸಲು ಸಾಧ್ಯವಾಗದ ಕಡೆಗಳಲ್ಲಿ, ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಬೇರೆ ಕಟ್ಟಡಗಳನ್ನು ಹಸ್ತಾಂತರ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು. ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮಕ್ಕಾಗಿ ಈಗಾಗಲೇ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಸಚಿವರು ತಿಳಿಸಿದರು.

 

- Advertisement - 

 

Share This Article
error: Content is protected !!
";