ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ- ಕನಿಷ್ಟ ವೇತನ ನಿಗದಿಗೆ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025-26ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.1000/- ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ ರೂ.750/- ಗಳನ್ನು ಹೆಚ್ಚಿಸಲಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ತಿಳಿಸಿದರು.

ವಿಧಾನಸಭೆಯ ಕಲಾಪದ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಸರ್ಕಾರಿ ಸೇವೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಅವರ ಮೇಲಿರುತ್ತದೆ. ಇವರುಗಳು ಕೆಲಸದ ಕೊಂಡಿಯಾಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಮಟ್ಟದಲ್ಲಿ ಸರ್ಕಾರದ ಕೆಲಸಗಳನ್ನು ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತಂದುಕೊಡುತ್ತಿದ್ದಾರೆ. ಇವರುಗಳಿಗೆ ಸೇವಾ ಭದ್ರತೆ, ಆರೋಗ್ಯ ಭದ್ರತೆ ಹಾಗೂ ವೇತನವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಪ್ರಶ್ನಿಸಿದ ವೇಳೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಸರ್ಕಾರದ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮ ಮಟ್ಟದಲ್ಲಿ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತಂದುಕೊಡುವ ನಿಟ್ಟಿನಲ್ಲಿ ಈ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ.

- Advertisement - 

ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ 4ನೇ ಸ್ಥಾನದಲ್ಲಿ ಅತ್ಯಧಿಕ ವೇತನವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.1000/- ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ ರೂ.750/- ಗಳನ್ನು ಹೆಚ್ಚಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತೆಯರ ವೇತನವನ್ನು ಪರಿಷ್ಕರಿಸುವ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಈ ಯೋಜನೆಯು ದಿವಂಗತ ಇಂದಿರಾಗಾಂಧಿಯವರು ಜಾರಿಗೆ ತಂದಿರುವ ಯೋಜನೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ನೀಡುವ ವೇತನವು ಕೇಂದ್ರ ಸರ್ಕಾರದ ಪಾಲು 9800 ಹಾಗೂ ರಾಜ್ಯಸರ್ಕಾರದ ಪಾಲು 2700 ರಾಜ್ಯ ಸರ್ಕಾರದ ಪಾಲಾಗಿರುತ್ತದೆ. ಆದರೆ ಕೇಂದ್ರ ಸರ್ಕಾರದ ಪಾಲು ಬರುತ್ತಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಹ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಈ ಕುರಿತು ಸ್ಪಂದಿಸಿರುವುದಿಲ್ಲ ಎಂದು ತಿಳಿಸಿದರು.

- Advertisement - 

ಪ್ರಸ್ತುತ 5000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಯೋಜಿಸಿದೆ ಎಂದು ಸಚಿವೆ ತಿಳಿಸಿದರು.

 

Share This Article
error: Content is protected !!
";