ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಲಕ್ಷ್ಮಿ ನಾರಾಯಣ್, ನಾಗರಾಜ್ ಆಯ್ಕೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಎಸ್ ಎಂ ಗೊಲ್ಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ. ಪಿ. ಲಕ್ಷ್ಮಿನಾರಾಯಣ್ ಹಾಗೂ ಉಪಾಧ್ಯಕ್ಷರಾಗಿ ನಾಗರಾಜುರವರು  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀನಾರಾಯಣ ಹಾಗೂ

ನಾಗರಾಜು ಸಹಕಾರ ಸಂಘವನ್ನ ಅಭಿವೃದ್ಧಿಯತ್ತ ಕೊಂಡೊಯ್ಯಲು ಸದಸ್ಯರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಇದುವರೆವಿಗೂ ಸಂಘದ ಅಭಿವೃದ್ಧಿಗೆ ಶ್ರಮಿಸಿದ ಹಿರಿಯರ ಮಾರ್ಗದರ್ಶನದಲ್ಲಿ ಸಂಘವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಅಹರ್ನಿಷಿ  ತಾವು ಶ್ರಮಿಸುವುದಾಗಿ ತಿಳಿಸಿದ್ದಾರೆ.

- Advertisement - 

 ನೂತನ ವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮ ಪಂಚಾಯಿತಿ ಸದಸ್ಯ ಎನ್. ಲೋಕೇಶ್, ಶಿವಕುಮಾರ್ಮಾಜಿ ಅಧ್ಯಕ್ಷರುಗಳಾದ ಜಿ. ಎಚ್. ಮಲ್ಲೇಶ್, ಚಿಕ್ಕೇಗೌಡ, ರಾಮಮುರ್ತಿ, ಗೋವಿಂದರಾಜು, ಬಸವರಾಜು ಮತ್ತು ಸಂಘದ ಎಲ್ಲಾ ನಿರ್ದೇಶಕರು ಹಾಗೂ ಗ್ರಾಮಸ್ಥರು ಅಭಿನಂದನೆ ಗಳನ್ನು ಸಲ್ಲಿಸಿದ್ದಾರೆ.

ಈ ಸಂದರ್ಬದಲ್ಲಿ  ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆಂಪಣ್ಣ ಸೇರಿದಂತೆ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";