ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾಧ್ಯಮದವರ ಜೊತೆ ಮಾತನಾಡಿದರು.
ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿಗಳಲ್ಲಿ ಲಾಲ್ ಬಹದ್ದೂರ್ ಶಾಸ್ತ್ರೀ ಕೂಡ ಒಬ್ಬರು.
ಈ ಮಹಾನ್ ಚೇತನಗಳ ಜಯಂತಿಯ ಜೊತೆ ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಕಳೆಗಟ್ಟಿದೆ. ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಕೂಡ ಕೋರುತ್ತೇನೆ ಎಂದು ಸಿಎಂ ತಿಳಿಸಿದರು.

