ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ಸಾವಿರ ದಿನ. ಹಾಗಾಗಿ ಎರಡು ದಿನಗಳ ಕಾಲ ನೀರಾವರಿ ವಿಚಾರದಲ್ಲಿ ಸಮ್ಮೇಳನ ಹಮ್ಮಿಕೊಂಡಿದ್ದೇವೆ. ಕೇಂದ್ರ ಮಂತ್ರಿಗಳು, ಸಿಎಂ ಸಿದ್ದರಾಮಯ್ಯ ಭಾಗಿಯಾಗುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ಭೂಮಿ ಗ್ಯಾರಂಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ನಿವೇಶನಗಳಿಗೆ ಭೂಮಿ ಹಕ್ಕುಗಳನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ ಎಂದು ಡಿಸಿಎಂ ತಿಳಿಸಿದರು.
ಭೂಮಿ ಹಕ್ಕುಗಳಿಲ್ಲದ ಸಾಮಾನ್ಯ ಜನರಿಗೆ ಖಾತೆ ಮತ್ತು ಹಕ್ಕುಪತ್ರಗಳನ್ನು ನೀಡುವ ದೀರ್ಘಕಾಲದ ಸಮಸ್ಯೆ ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

