ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಬಾಕಿ ಉಳಿದಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.
ಸಚಿವರಾದ ಸತೀಶ್ ಜಾರಕಿಹೊಳಿ, ಡಾ. ಎಚ್. ಸಿ. ಮಹಾದೇವಪ್ಪ, ದೆಹಲಿ ಪ್ರತಿನಿಧಿ ಜಯಚಂದ್ರ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ವೇಳೆ ಹಾಜರಿದ್ದರು.