ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ತಾಲೂಕಿನ ಹೊಸಹಳ್ಳಿಯಲ್ಲಿ ನೂತನ ಬಿ ದೇವರಾಜ್ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಡಾ ಶ್ರೀನಿವಾಸ್ ಎನ್ ಟಿ ರವರು ಭೂಮಿ ಪೂಜೆ ಸಲ್ಲಿಸಿ ಮಾತನಾಡಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನವಿದೆ ಅದರಂತೆ ನಮ್ಮ ಕೂಡ್ಲಿಗಿ ತಾಲೂಕಿನಲ್ಲಿ ಅತಿ ಹೆಚ್ಚು ವಿದ್ಯಾಭ್ಯಾಸ ಕಡಿಮೆಯುಳ್ಳ. ಮಹಿಳೆಯರು ಕಂಡು ಬರುತ್ತಾರೆ.
ಮಹಿಳೆಯರು ಹೆಚ್ಚಿನ ಮಟ್ಟಕ್ಕೆ ವಿದ್ಯಾಭ್ಯಾಸ ಕಲ್ಪಿಸಿಕೊಂಡು ತಮ್ಮ ಮೇಲೆ ತಾವು ಜವಾಬ್ದಾರಿ ವಹಿಸಿಕೊಳ್ಳಬೇಕು. ಮತ್ತು ಪ್ರತಿಯೊಬ್ಬ ಪೋಷಕರು ಮಹಿಳೆಯರಿಗೆ ಪ್ರೋತ್ಸಾಹ ನೀಡಿ ನಿಮ್ಮ ಮಕ್ಕಳನ್ನು ವಿದ್ಯಾಭ್ಯಾಸದ ಕಡೆ ಕಳಿಸಿಕೊಡಬೇಕು ಹಾಗೂ ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳಿಗೆ ಅನುಕೂಲವಾಗಲಿ ಎಂದು ಇಂದು ನಮ್ಮ ಕಾನಹೊಸಹಳ್ಳಿಯಲ್ಲಿ ನೂತನ ಬಾಲಕಿಯರ ನಿಲಯಕ್ಕೆ ಭೂಮಿ ಪೂಜೆ ಸಲ್ಲಿಸಿದ್ದೇನೆ
ಅತಿ ಶೀಘ್ರದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುತ್ತೇವೆ. ಮತ್ತು ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಇದ್ದರೂ ಸಹ ನೇರವಾಗಿ ನನ್ನನ್ನು ಸಂಪರ್ಕಿಸಿ ಹಾಗೂ ಅತಿ ಹಿಂದುಳಿದಿರುವಂತಹ ನಮ್ಮ ತಾಲೂಕನ್ನು ಅಭಿವೃದ್ಧಿಯನ್ನು ಹೊತ್ತು ತರುವ ನನ್ನ ಗುರಿಯಾಗಿದೆ ಎಂದರು.
ಈ ಭೂಮಿ ಪೂಜ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಜಿ ಓಬಣ್ಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಜಿ ಕುಮಾರ ಗೌಡ ಹಿಂದುಳಿದ ವರ್ಗದ ತಾಲೂಕು ಕಲ್ಯಾಣಾಧಿಕಾರಿ ಶ್ಯಾಮಪ್ಪ ನಿಲಯ ಪಾಲಕರು ಹಾಗೂ ಡಿಎಸ್ಎಸ್ ತಾಲೂಕು ಸಂಚಾಲಕ ಎಳನೀರು ಗಂಗಣ್ಣ ಹಾಗೂ ಇನ್ನೂ ಅನೇಕ ಇಲಾಖೆಯ ಅಧಿಕಾರಿಗಳು ಗ್ರಾ. ಪಂ. ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮಸ್ಥರು ಮುಖಂಡರು ಇದ್ದರು ಎಂದು ಸಿ ಅರುಣ್ ಕುಮಾರ್ ತಿಳಿಸಿದ್ದಾರೆ.