ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಹೊಸ ಕಟ್ಟಡಕ್ಕೆ 25 ಲಕ್ಷ ರೂಗಳಲ್ಲಿ ಅನೇಕ ಗಣ್ಯರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು.
ತೂಬಗೆರೆ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ರಾಜಕುಮಾರ್, ಉಪಾಧ್ಯಕ್ಷ ಸುಜಾತ, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್. ಅರವಿಂದ್, ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಬಿ.ಬಸವರಾಜು, ನಿರ್ದೇಶಕ ಕಾಂತರಾಜು, ಗಂಗರಾಜು, ತಮ್ಮಣ್ಣ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ರಾಮಕೃಷ್ಣ, ಟಿ. ವಿ.ವೆಂಕೆಟೇಶ್ ಹಾಗು ಕಂಪನಿಯ ಸಿಬ್ಬಂದಿ ವರ್ಗದ ಹಾಜರಿದ್ದರು,