ಚಂದ್ರವಳ್ಳಿ ನ್ಯೂಸ್, ತುಮಕೂರು:
ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಲತಾ. ಕೆ ಅವರಿಗೆ ಶ್ರೀಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಜನ್(ಸಾಹೇ) ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ ಸಂದಿದೆ.
ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಜೈವಿಕ ವೈದ್ಯಕೀಯ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಎ.ಎಸ್.ರಾಜು ಅವರ ಮಾರ್ಗದರ್ಶನದಲ್ಲಿ ‘ಡಿಸೈನ್ ಅಂಡ್ ಡೆವೆಲೆಪ್ಮೆಂಟ್ ಆಫ್ ಮಲ್ಟಿಮಾಡೆಲ್ ಬೈಯೋಮೆಟ್ಟಿçಕ್ ಸಿಸ್ಟ್ಮ್ ಯೂಸಿಂಗ್ ಇಸಿಜಿ ಆಡಿಯೋ ಅಂಡ್ ವಿಷ್ಯುಯಲ್ಸ್ ಕ್ಯೂ” ವಿಷಯ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಪಿಎಚ್ಡಿ ಪದವಿ ಲಭಿಸಿದೆ.
ಲತಾ. ಕೆ ಅವರು ಮೂಲತ: ತುಮಕೂರು ಜಿಲ್ಲೆಯವರಾಗಿದ್ದು ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಳೆದ ೧೦ ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಚಾರ ಸಂಕಿರಣಗಳಲ್ಲಿ ಅವರು ಭಾಗವಹಿಸಿ, ಪ್ರಬಂಧಗಳನ್ನು ಮಂಡಿಸಿದ್ದಾರೆ.

