ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಯಂಡಹಳ್ಳಿ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ಅಗತ್ಯ ಸುರಕ್ಷತೆ ಮತ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಸಲುವಾಗಿ, ರೈಲು ಸಂಖ್ಯೆ 06270 ಎಸ್ಎಂವಿಟಿ
ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ವಿಶೇಷ ರೈಲು ಡಿಸೆಂಬರ್-6, 8 ಮತ್ತು 10, 2024 ರಂದು ತನ್ನ ನಿಗದಿತ ಸಮಯಕ್ಕಿಂತ 60 ನಿಮಿಷ ತಡವಾಗಿ ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ಹೊರಡಲಿದೆ,
ಮತ್ತು ಇದೆ ರೈಲು (06270) ಡಿಸೆಂಬರ್ 15, 2024 ರಂದು ತನ್ನ ಮೂಲ ನಿಲ್ದಾಣದಿಂದ 50 ನಿಮಿಷ ತಡವಾಗಿ ಹೊರಡಲಿದೆ ನೈರುತ್ಯ ರೈಲ್ವೆ, ಹುಬ್ಬಳ್ಳಿ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

