ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಸುವರ್ಣ ಸೌಧದ ಎದುರು 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರುಗಳಾದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರ ಮೇಲೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಲಾಠಿ ಪ್ರಹಾರ ನಡೆಸಿದೆ. ಸಂವಿಧಾನದತ್ತವಾಗಿರುವ ಪ್ರತಿಭಟನೆಯ ಹಕ್ಕನ್ನೂ ತುಘಲಕ್ ಸಿದ್ದರಾಮಯ್ಯ ಸರ್ಕಾರ ಕಸಿಯಲು ಯತ್ನಿಸಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ಪಂಚಮಸಾಲಿ ಸಮುದಾಯದ ನ್ಯಾಯಯುತ ಬೇಡಿಕೆಗೆ ಅನ್ಯಾಯ ಮಾಡುತ್ತಿದೆ. ಪ್ರತಿಭಟನೆ ನಿರತರ ಮೇಲೆ ಲಾಠಿ ಚಾರ್ಜ್ ಮಾಡಿ ರಕ್ತ ಬರುವಂತೆ ಮಾಡಿದ್ದು ಕ್ಷಮಿಸಲಾರದಂತಹ ಅಪರಾಧ. ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಕ್ಕೇ ಸಿಗುತ್ತದೆ ಎಂದು ಬಿಜೆಪಿ ಎಚ್ಚರಿಸಿದೆ.
ಜಗದ್ಗುರು ಪೂಜ್ಯ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ನ್ಯಾಯಯುತವಾದ ಹೋರಾಟದಲ್ಲಿ ಬಿಜೆಪಿ ಎಂದಿಗೂ ಜೊತೆಗಿರಲಿದೆ ಎಂದು ತಿಳಿಸಿದೆ.

