“ದೀಪ ಸಂಜೀವಿನಿ” ಕಾರ್ಯಕ್ರಮಕ್ಕೆ ಚಾಲನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಒನಕೆ ಓಬವ್ವ ವೃತ್ತದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ದೀಪ ಸಂಜೀವಿನಿಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್ ಅವರು ಚಾಲನೆ ನೀಡಿದರು.  

ದೀಪ ಸಂಜೀವಿನಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಆರು ತಾಲ್ಲೂಕುಗಳಿಂದ ಬಂದಂತಹ ಸ್ವ ಸಹಾಯ ಗುಂಪಿನ ಮಹಿಳೆಯರು ತಮ್ಮ ಸ್ವಂತ ಪರಿಶ್ರಮ ಹಾಗೂ ಕರ ಕುಶಲತೆಯಿಂದ ತಯಾರಿಸಿದ ದೀಪಗಳು,

 ಮಣ್ಣಿನ ಹಣತೆ, ಕೊಬ್ಬರಿ ಎಣ್ಣೆ, ತಿಂಡಿತಿನಿಸುಗಳು, ಕೈಕಸೂತಿ ಬಟ್ಟೆ, ಬ್ಯಾಗ್, ಗೊಂಬೆ ಹಾಗೂ ವಿವಿಧ ಬಗೆಯ ಉಪ್ಪಿನಕಾಯಿ ಮತ್ತು ರೊಟ್ಟಿಯ ಖಾದ್ಯಗಳು ಸೇರಿದಂತೆ ಸ್ವದೇಶಿ ಉತ್ಪನ್ನಗಳನ್ನು  ಪ್ರದರ್ಶಿಸಿ ಮಾರಾಟ ಮಾಡಲಾಯಿತು.

ವಿಶೇಷವಾಗಿ ಹಲವು ರೀತಿಯಲ್ಲಿ ವಿನ್ಯಾಸ ಮಾಡಲಾಗಿದ್ದ ದೀಪಗಳು ನೋಡುಗರನ್ನು ಆಕರ್ಷಿಸಿದವು.
ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ ಮತ್ತಿತರರು ಇದ್ದರು.

 

 

 

- Advertisement -  - Advertisement -  - Advertisement - 
Share This Article
error: Content is protected !!
";