‘ನಿತ್ಯಾನ್ನ ದಾಸೋಹ’ಕ್ಕೆ ಚಾಲನೆ: ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವದ ಸಂಭ್ರಮ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ಹೊರವಲಯದ ನರಹರಿ ನಗರದಲ್ಲಿರುವ ಶ್ರೀನರಹರಿ ಸದ್ಗುರು ಆಶ್ರಮದಲ್ಲಿ ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವದ ಅಂಗವಾಗಿ
ನಿತ್ಯಾನ್ನ ದಾಸೋಹಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

​ಗುರುಗಳ ಆಶೀರ್ವಚನ-
​ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಆಶ್ರಮದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ. ವೈ. ರಾಜಾರಾಮ್ ಗುರುಗಳು ಮಾತನಾಡಿ
, “ಗುರುತಾಯಿ ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ ಈ ಸೇವೆಯನ್ನು ಆರಂಭಿಸಲಾಗಿದೆ. ಇಂದಿನಿಂದ ಆಶ್ರಮದಲ್ಲಿ ಪ್ರತಿನಿತ್ಯ ಮಧ್ಯಾಹ್ನ 12:30 ರಿಂದ 2:00 ಗಂಟೆಯವರೆಗೆ ಅನ್ನದಾಸೋಹ ನಡೆಯಲಿದೆ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು,” ಎಂದು ಕರೆ ನೀಡಿದರು.

- Advertisement - 

​ಗಣ್ಯರ ಉಪಸ್ಥಿತಿ-
​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗಣ್ಯರು ದಾಸೋಹದ ಮಹತ್ವದ ಕುರಿತು ಮಾತನಾಡಿದರು.

​ ಶ್ರೀನರಹರಿ ಸದ್ಗುರು ಆಶ್ರಮದ ಉಪಾಧ್ಯಕ್ಷ ಮಾಕಂ ಶ್ರೀನಿವಾಸಲು, ಐ.ಐ.ಎಂ ಬೆಂಗಳೂರು ನಿವೃತ್ತ ಪ್ರೊಫೆಸರ್ ಡಾ. ಬಿ. ಶೇಖರ್, ​ಪ್ರಗತಿಪರ ರೈತ ಕುಂಕಲ ಕೃಷ್ಣಯ್ಯ, ನಿವೃತ್ತ ತಹಶೀಲ್ದಾರ್ ಎನ್. ರಘುಮೂರ್ತಿ, ವೈ. ಏಕಾಂತ ರಾಮ್, ಡಾ. ವೈ. ನರಹರಿ, ಈಶ್ವರಗೆರೆ ರಂಗನಾಥ್, ರಾಜೇಶ್ವರಿ, ಲಾವಣ್ಯ, ಪದ್ಮಶ್ರೀ, ರವಿಶಂಕರ್, ಯಾದಾಟಿ ಚೇತನ್, ದೇವರಾಜರೆಡ್ಡಿ ಹಾಗೂ ಆಶ್ರಮದ ಸದ್ಭಕ್ತ ಮಂಡಳಿಯ ಸದಸ್ಯರಾದ ಮಲ್ಲಿಕಾರ್ಜುನಪ್ಪ, ರೇವಣಸಿದ್ದಪ್ಪ, ಸುಹಾಸ್, ವೈಭವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";