ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಬಸವ ಭವನದ ಬಳಿ ಇರುವ ಲಾವಣ್ಯ ಶಿಕ್ಷಣ ಮಹಾವಿದ್ಯಾಲಯವು 2025 ನೇ ಸಾಲಿನ ಬಿಇಡಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ನೀಲಮ್ಮ ಶೇ 92, ರೂಪ ಡಿ ಶೇ 91.83. ಹರ್ಷಿತಾ ಟಿ ಎ.ಶೇ 90.83, ಮಂಜುನಾಥ್ ಶೇ 90.50, ನಿತಿನ್ ಬಿ ಎಸ್ ಶೇ 90.33 ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.
ಉತ್ತಮ ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ವಿಶ್ವಾಸ್ ಹನುಮಂತೇಗೌಡ, ಬಿಇಡಿ ಪ್ರಾಂಶುಪಾಲ ಜಿ ಕೃಷ್ಣಮೂರ್ತಿ,

ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ಸಿ ಮಂಜುನಾಥ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

