ಬಸವ ಸಂಸ್ಕೃತಿ ಅಭಿಯಾನಕ್ಕೆ ಅದ್ದೂರಿ ಚಾಲನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್ತು  ಹಾಗೂ ಅನೇಕ ಸಂಘ ಸಂಸ್ಥೆಗಳವತಿಯಿಂದ ಹಮ್ಮಿಕೊಂಡಿದ್ದ ಬಸವ ಸಂಸ್ಕೃತಿ ಅಭಿಯಾನಕ್ಕೆ ವಿವಿಧ ಮಠಗಳ ಪೂಜ್ಯಗುರುಗಳ ಸಾನಿಧ್ಯದಲ್ಲಿ ಅದ್ದೂರಿಯಾಗಿ ಚಾಲನೆ ನೀಡಿ ಮಾತನಾಡಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಈ  ಬಸವ ಸಂಸ್ಕೃತಿ ಅಭಿಯಾನಕ್ಕೆ  ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿ, ಯಶಸ್ವಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬಸವಧರ್ಮ ಜಾಗತಿಕ ಧರ್ಮವಾಗುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ಭರವಸೆ ನೀಡಿದರು.
 

- Advertisement - 

ಬಸವಣ್ಣ ನವರ ಜನ್ಮಸ್ಥಳ ಬಸವನಬಾಗೇವಾಡಿ ಯಿಂದ ಆರಂಭಗೊಂಡಿರುವ ಬಸವ ಸಂಸ್ಕೃತಿ ಅಭಿಯಾನದ ರಥವು ನಾಡಿನಾದ್ಯಂತ ಸಂಚರಿಸಿ, ಅಕ್ಟೋಬರ್ 5ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದರು.

 

- Advertisement - 

Share This Article
error: Content is protected !!
";