ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ದೇವರ ಮೇಲೆ ಅಪಾರವಾದ ಭಕ್ತಿ ಮತ್ತು ಶ್ರದ್ದೆ ಇಂದಿಗೂ ನಮ್ಮಲ್ಲಿ ಜೀವಂತವಾಗಿದೆ. ಧಾರ್ಮಿಕ ಕಾರ್ಯಕ್ರಮಗಳನ್ನು ಪ್ರತಿವರ್ಷವೂ ತಪ್ಪದೆ ಮಾಡುವ ಮೂಲಕ ಭಗವಂತನ ಅನುಗ್ರಹ ಪಡೆಯಲು ನಾವೆಲ್ಲರೂ ಉತ್ಸವಗಳನ್ನು ಹಮ್ಮಿಕೊಳ್ಳುತ್ತೇವೆ. ಪ್ರತಿಯೊಬ್ಬರ ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿ ಕರುಳಿಸಲು ಭಗವಂತನಿಂದ ಮಾತ್ರ ಸಾಧ್ಯವೆಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು, ಭಾನುವಾರ ತಾಲ್ಲೂಕಿನ ದೊಡ್ಡಬೀರನಹಳ್ಳಿಗ್ರಾಮದ ಜುಂಜಪ್ಪಸ್ವಾಮಿ ದೇವಸ್ಥಾನದ ಕಳಸ ಪ್ರತಿಷ್ಠಾಪನೆ ಹಾಗೂ ಕರೀಕೆರೆ ಗ್ರಾಮದ ಶ್ರೀಓಬಳ ನರಸಿಂಹಸ್ವಾಮಿ ದೇವಸ್ಥಾನದ ಉದ್ಘಾಟನೆ ಹಾಗೂ ಕಳಸರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೆರೆದಿದ್ದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಮೂರನೇ ಬಾರಿಗೆ ನನಗೆ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಜನತೆ ಮತ್ತು ದೇವರಿಗೆ ವಂದಿಸುತ್ತೇನೆ. ಕ್ಷೇತ್ರದ ಯಾವುದೇ ಭಾಗದಲ್ಲಾದರೂ ಧಾರ್ಮಿಕ ಕಾರ್ಯಗಳು ನಡೆದರೂ ತಪ್ಪದೆ ಭಾಗವಹಿಸುತ್ತೇನೆ.
ಎಲ್ಲರ ಕಷ್ಟಗಳನ್ನು ಪರಿಹರಿಸುವ ಶಕ್ತಿ ದೇವರಲ್ಲಿ ಮಾತ್ರ ಇದೆ ಎಂಬ ನಂಬಿಕೆ ಇಂದಿಗೂ ನಮ್ಮಲ್ಲಿ ಅಚಲವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರವಿಕುಮಾರ್, ಗ್ಯಾರಂಟಿ ಸಮಿತಿ ಸದಸ್ಯ ಅನಿಲ್ ಕುಮಾರ್, ಜಿಪಂ ಕೆಡಿಪಿ ಸದಸ್ಯ ಓ.ರಂಗಸ್ವಾಮಿ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ಈರಣ್ಣ, ಜಯಣ್ಣ, ಸುರೇಶ್, ಬೋಪಣ್ಣ, ನಾಗರಾಜು, ಗ್ರಾಮ ಪಂಚಾಯಿತಿ ಸದಸ್ಯ ಡಿ.ರಾಜಪ್ಪ, ಮಂಜುನಾಥ, ಭೀಮಾರೆಡ್ಡಿ, ಯಂಜಾರೆಡ್ಡಿ, ವೆಂಕಟೇಶ್, ಕೃಷ್ಣಪ್ಪ ಮುಂತಾದವರು ಪಾಲ್ಗೊಂಡಿದ್ದರು.