ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಜಿಲ್ಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೇರಳ ಅವಕಾಶವಿದೆ. ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಿದಷ್ಟು ಜಿಲ್ಲೆಯು ಅಭಿವೃದ್ಧಿ ಜೊತೆಗೆ ಸ್ವಯಂ ಉದ್ಯೋಗವೂ ಸೃಷ್ಠಿಯಾಗಲಿದೆ.
ದುರ್ಗದ ಏಳು ಸುತ್ತಿನ ಕೋಟೆ, ಚಂದ್ರವಳ್ಳಿ, ದವಳಪ್ಪನಗುಡ್ಡ, ಆಡುಮಲ್ಲೇಶ್ವರ, ಜೋಗಿಮಟ್ಟಿ, ಪುರಾತನ ದೇಗುಲಗಳು, ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ, ಹೊಸದುರ್ಗದ ಹಾಲುರಾಮೇಶ್ವರ, ವಿ.ವಿ.ಸಾಗರದಲ್ಲಿ ಬೋಟಿಂಗ್ ಮಾಡಲು ಅವಕಾಶವಿದೆ. ಹಾಗಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದರೆ ಅನುಕೂಲವಾಗಲಿದೆ ಎಂದರು.
ಚಿತ್ರದುರ್ಗಕ್ಕೆ ವಿಶೇಷವಾಗಿ ಉದ್ದಿಮೆಯ ಅವಶ್ಯಕತೆ ಇದೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಯೋಜನೆ ಪೂರ್ಣಗೊಂಡರೆ ಕೃಷಿಕರಿಗೆ ಸ್ವಲ್ಪಮಟ್ಟಿಗೆ ಅನುಕೂಲವಾಗಲಿದೆ. ಚಿತ್ರದುರ್ಗ ನಗರದಲ್ಲಿ ಬಹಳಷ್ಟು ಸಮಸ್ಯೆಗಳಿದ್ದು, ಕೊಳಚೆ ಪ್ರದೇಶಗಳ ಸಂಖ್ಯೆ ಹೆಚ್ಚಾಗಿದೆ. ಮೂಲಭೂತ ಸೌಕರ್ಯಗಳ ಕೊರತೆ ಇದೆ. ಯುಜಿಡಿ ಕಾಮಗಾರಿಗಳು ಕಳಪೆಯಾಗಿದ್ದು, ಇದು ತುರ್ತಾಗಿ ಸರಿಯಾಗಬೇಕಿದೆ. ಇಲ್ಲಿನ ಬಹಳ ಜನರಿಗೆ ವಸತಿ ಯೋಜನೆಗಳ ಅವಶ್ಯಕತೆ ಇದೆ ಎಂದು ಹೇಳಿದರು.