ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೂಕಿನ,ತೂಬಗೆರೆ ಹೋಬಳಿ ತೂಬಗೆರೆ ಗ್ರಾಮದ
ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ ಫೆ. 17 ರಂದು ನೆಡೆಯಲಿದೆ. ಹಾಗೂ ಇದೇ ದಿನ ಕಲ್ಯಾಣ ಮಂಟಪದ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಹ ನೆರವೇರಲಿದೆ.
ವಿವಿಧ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ,108 ಕಳಸ ಸ್ಥಾಪನೆ, ಗಣಪತಿ ಹೋಮ, ಪಣ್ಯಾಹ, ಪೂರ್ಣಾಹುತಿ ಮತ್ತು ಮಹಾ ಕುಂಭಾಭಿಷೇಕದೊಂದಿಗೆ ರಾಜಗೋಪುರ ಲೋಕಾರ್ಪಣೆಗೊಳ್ಳಲಿದೆ. ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿನಿಯೋಗ ಕಾರ್ಯಕ್ರಮ ಹಾಗೂ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ, ಸಂಸದ ಸುಧಾಕರ್, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಶಾಮಪ್ಪ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.