ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರುಗಳಾದ ದಿನೇಶ್ ಗೌಡ, ಸುಬ್ರಮಣಿ, ಶಶಿಕೀರ್ತಿ ಅವರು ಸೇರಿದಂತೆ ಹಲವಾರು ಬೆಂಬಲಿಗರು ನಮ್ಮ ನಿವಾಸದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರ್ಪಡೆಯಾದರು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮುಖಂಡರಿಗೆ ಪಕ್ಷದ ಶಾಲು ಹೊದಿಸಿ, ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಇದೇ ವೇಳೆ ಬೂತ್ ಮತ್ತು ವಾರ್ಡ್ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಆದ್ಯತೆ ನೀಡುವ ಮೂಲಕ ಮುಂಬರುವ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವಂತೆ ಸಲಹೆ ನೀಡಲಾಯಿತು ಎಂದು ನಿಖಿಲ್ ತಿಳಿಸಿದ್ದಾರೆ.

