ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಸತ್ತಿನ ಇಂದು ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು , ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಜಗದೀಪ್ ಧನಕರ್, ಪ್ರಧಾನಮಂತ್ರಿ
ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹಾಗೂ ಹಲವು ನಾಯಕರು ಭಾಗವಹಿಸಿದ್ದರು.
ಇದೇ ವೇಳೆ ಸಂವಿಧಾನ ಸದನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಸತ್ ನ ಎರಡೂ ಮನೆಯ ಸದಸ್ಯರು ಹಾಗೂ ಗಣ್ಯರು ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಗೌರವ ಸಲ್ಲಿಸಲಾಯಿತು.