ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಕು ಸಿಕ್ಕರೆ ಸಾಕು ರಾಷ್ಟ್ರೀಯ, ಅಂತರಾಷ್ಟ್ರೀಯ ಸೇರಿದಂತೆ ಪ್ರಪಂಚದ ಎಲ್ಲ ಉಸಾಬರಿಗಳ ಬಗ್ಗೆ ಮೂಗು ತೂರಿಸಿ ಉಪದೇಶ ಮಾಡುವ ಸ್ವಯಂ ಘೋಷಿತ ಮಹಾನ್ ಮೇಧಾವಿ ಕಲಬುರಗಿ
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಮ್ಮ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳು ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರೇ, ಪ್ರಪಂಚದ ಉಸಾಬರಿ ಬಿಟ್ಟು, ನಿಮ್ಮ ಇಲಾಖೆ, ನಿಮ್ಮ ಜಿಲ್ಲೆ, ನಿಮ್ಮ ಊರಿನ ಸಮಸ್ಯೆಗಳ ಬಗ್ಗೆ ಗಮನ ಕೊಡಿ ಸ್ವಾಮಿ. ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರ ಸಮಸ್ಯೆ ಕೇಳಿ ಅವರ ಕಷ್ಟಕ್ಕೆ ಸ್ಪಂದಿಸಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

