ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡದರೆ ಕಾನೂನು ಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮವಾದ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಬೀಜ ಮತ್ತು ವಿವಿಧ ರಸಗೊಬ್ಬರಗಳನ್ನು ಕೊಂಡು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳುತ್ತೀದ್ದಾರೆ. ಆದರೆ ಜಿಲ್ಲೆಯಲ್ಲಿ ಅಲ್ಲಲ್ಲಿ ರಸಗಗೊಬ್ಬರಗಳನ್ನು ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರಿಂದ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರಿಂದ ದೂರುಗಳು ಸ್ವೀಕೃತವಾಗುತ್ತಿವೆ.

ಆದುದರಿಂದ ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು.

ಕಡ್ಡಾಯವಾಗಿ ರಸಗೊಬ್ಬರಗಳ ದರ ಪಟ್ಟಿ ಮತ್ತು ದೈನಂದಿನ ದಾಸ್ತಾನನ್ನು ತಮ್ಮ ಮಾರಾಟ ಮಳಿಗೆಗಳ ಮುಂದೆ ಸಾರ್ವಜನಿಕವಾಗಿ ಕಾಣುವಂತೆ ನಾಮಫಲಕ ಪ್ರದರ್ಶಿಸಬೇಕು. ತಪ್ಪಿದಲ್ಲಿ ರಸಗೊಬ್ಬರ (ನಿರವಯವ, ಸಾವಯವ ಅಥವಾ ಮಿಶ್ರಿತ) (ನಿಯಂತ್ರಣ) ಆದೇಶ, 1985 ನಿಯಮಾವಳಿಗಳ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು.

 ಕೃತಕ ರಸಗೊಬ್ಬರ ಅಭಾವ ಸೃಷ್ಟಿಸಿದ್ದು ಕಂಡುಬಂದಲ್ಲಿ ರಸಗೊಬ್ಬರ ಮಾರಾಟ ಪರವಾನಗಿಯನ್ನು ಅಮಾನತ್ತು/ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";